ಜಮ್ಮು-ಕಾಶ್ಮೀರದಲ್ಲಿ ಭೀಕರ ಗುಂಡಿನ ಕಾಳಗ ನಡೆದಿದ್ದು, ಬಿಎಸ್ ಎಫ್ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಓರ್ವ ಬಿಎಸ್ ಎಫ್ ಯೋಧ ಹುತಾತ್ಮತಾಗಿದ್ದಾರೆ.
ಉದಂಪುರದ ಬಸಂತ್ ಗಢದ ಬಳಿ ಭೀಕರ ಗುಂಡಿನ ಕಾಳಗ ನಡೆದಿದ್ದು. ಉಗ್ರರ ವಿರುದ್ಧ ಭಾರತ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರದ ದುಡು-ಬಸಂತ್ಗರ್ ಪ್ರದೇಶದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ.ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬಾರ್ತ್ವಾಲ್ ಅವರ ಪ್ರಕಾರ, ಪ್ರಸ್ತುತ ಗುಂಡಿನ ಚಕಮಕಿ ನಡೆಯುತ್ತಿದೆ, ಭಾರತೀಯ ಸೇನೆ ಮತ್ತು ಜೆ &ಕೆ ಪೊಲೀಸರು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪಹಲ್ಗಾಮ್ನಲ್ಲಿ 26 ನಾಗರಿಕರನ್ನು ಬಲಿತೆಗೆದುಕೊಂಡ ಭೀಕರ ಭಯೋತ್ಪಾದಕ ದಾಳಿಯ ಎರಡು ದಿನಗಳ ನಂತರ ಈ ಘರ್ಷಣೆ ನಡೆದಿದೆ.
ಏತನ್ಮಧ್ಯೆ, ಪ್ರತ್ಯೇಕ ಘಟನೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಮೂಲಕ ಒಳನುಸುಳಲು ಪ್ರಯತ್ನಿಸುತ್ತಿದ್ದ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಬುಧವಾರ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸೇನೆ ವರದಿ ಮಾಡಿದೆ.