ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಪಾರ್ಸಿ ಅಲ್ಪಸಂಖ್ಯಾತ ಸಮುದಾಯದ ವಿಧ್ಯಾರ್ಥಿಗಳಿಂದ ಅರಿವು (ಸಿಇಟಿ/ನೀಟ್) ಶೈಕ್ಷಣಿಕ ಸಾಲ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
2025-26ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿಇಟಿ/ನೀಟ್) ನಲ್ಲಿ ಆಯ್ಕೆಯಾಗುವ ವೈದ್ಯಕೀಯ ಎಂ.ಬಿ.ಬಿ.ಎಸ್ ಹಾಗೂ ದಂತ ವೈಧ್ಯಕೀಯ (ಬಿ.ಡಿ.ಎಸ್) ಹಾಗೂ ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೇಕ್ಚರ್ , ಬಿ.ಆಯುಷ್ , ಫಾರ್ಮಸಿ, ಕೃಷಿ ವಿಜ್ಙಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ kmdconline.karnataka.gov.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರಿವು ಸಾಲದ ಯೋಜನೆ (ರಿನ್ಯೂವಲ್) ಗೆ ಸಲ್ಲಿಸಬೇಕಾದ ದಾಖಲೆ:
ಬೊನಾಫೈಡ್ / ಅಧ್ಯಯನ ಪ್ರಮಾಣ ಪತ್ರ, ಕಾಲೇಜು ಶುಲ್ಕದ ವಿವರ, ಹಿಂದಿನ ವರ್ಷ ಪಾಸಾದ ಅಂಕಪಟ್ಟಿ, ಕಾಲೇಜು ಬ್ಯಾಂಕ್ ವಿವರಗಳು, ಭದ್ರತಾ ಠೇವಣಿ (ಸಾಲದ ಮೊತ್ತದ ಶೇ.12) ಪಾವತಿ ಮಾಡಿದ ರಶೀದಿ, ಕೆಇಎ ದಾಖಲಾತಿ ಆದೇಶ ಪ್ರತಿ, ಇಂಡೆಮ್ನಿಟೀ (ನಷ್ಟ ಪರಿಹಾರ) ಬಾಂಡ್, ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ, ಪೋಷಕರ ಸ್ವಯಂ ಘೋಷಣೆ ಪತ್ರ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆಂಟ್ ಪ್ರದೇಶದ ವಿಜಯನಗರ ಕಾಲೋನಿಯ ಹಳೇ ಮಾರುಕಟ್ಟೆ ರಸ್ತೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಕನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.