ಬಳ್ಳಾರಿ : ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಪರಿಶಿಷ್ಟ ವರ್ಗದ 03 (ಬಾಲಕ) ಮತ್ತು 9ನೇ ತರಗತಿಯಲ್ಲಿ ಪರಿಶಿಷ್ಟ ವರ್ಗದ 01 (ಬಾಲಕ) ಸ್ಥಾನ ಖಾಲಿಯಿದ್ದು, ಅರ್ಹತಾ ಪರೀಕ್ಷೆ ಮೂಲಕ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏ.26 ಕೊನೆಯ ದಿನವಾಗಿದ್ದು, ಅರ್ಹತಾ ಪರೀಕ್ಷೆಯು ಏ.27 ರಂದು ಬೆಳಿಗ್ಗೆ 09 ಗಂಟೆಗೆ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ನಡೆಸಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರ ಕಚೇರಿಗೆ ಸಂಪರ್ಕಿಸಬಹುದು ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ವಸತಿ ಶಾಲೆ