ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಬಲಿಯಾದ ಮತ್ತೋರ್ವ ಕನ್ನಡಿಗ ಭರತ್ ಭೂಷಣ್ ಅವರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ವಿದ್ಯುತ್ ಚಿತಾಗಾರದಲ್ಲಿ ಭರತ್ ಭೂಷಣ್ ಅಂತ್ರ್ಯಕ್ರಿಯೆ ನರವೇರಿಸಲಾಅಯಿತು. ಇದಕ್ಕೂ ಮುನ್ನ ಸಚಿವ ರಾಮಲಿಂಗಾರೆಡ್ದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ ಸೇರಿದಂತೆ ಹಲವು ಗಣ್ಯರು ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಬಳಿಕ ಪೊಲೀಸರಿಂದ ಗಾಲಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ಸರ್ಕಾರಿ ಗೌರವಗಳೊಂದಿಗೆ ಭರತ್ ಭೂಷಣ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಜಮ್ಮು-ಕಾಶ್ಮೀರದ ಪಹಲ್ಗಾಮ್ ಗೆ ಪತ್ನಿ ಸುಜಾತಾ ಹಾಗೂ ಮೂರು ವರ್ಷದ ಮಗನೊಂದಿಗೆ ಭರತ್ ಭೂಷಣ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಎರಡು ದಿನಗಳ ಹಿಂದೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಭರತ್ ಭೂಷಣ್ ಬಲಿಯಾಗಿದ್ದಾರೆ. ಪತ್ನಿ ಹಾಗೂ ಮೂರು ವರ್ಷದ ಮಗ ಪಾರಾಗಿದ್ದಾರೆ.