ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ 28 ಪ್ರವಾಸಿಗರನ್ನು ಉಗ್ರರು ಗುಂಡಿಟ್ತು ಹತ್ಯೆಘೈದುರುವ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಕ್ಷಣದಲ್ಲಿ ಭಾರತ ಪ್ರತಿಕಾರ ತೀರಿಸಿಕೊಳ್ಳಲು ಸಜ್ಜಾಗಿದೆ. ಇಂತಹ ಸಂದರ್ಭದಲ್ಲೇ ಮತ್ತೊಂದು ಅವಘಡ ಸಂಭವಿಸಿದೆ.
ಆಕಸ್ಮಿಕವಾಗಿ ಗಡಿ ದಾಟಿದ್ದ ಬಿಎಸ್ ಎಫ್ ಯೋಧರೊಬ್ಬರನ್ನು ಪಾಕಿಸ್ತಾನ ರೇಂಜರ್ ಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪಂಜಾಬ್ ನ ಫಿರೋಜ್ ಪುರದಲ್ಲಿ ಕರ್ತವ್ಯದಲ್ಲಿದ್ದ ಬಿಎಸ್ ಎಫ್ ಯೋಧರೊಬ್ಬರು ಅಂತರಾಷ್ಟ್ರೀಯ ಗಡಿ ದಾಟಿದ್ದು, ಇದೇ ವೇಳೆ ಪಾಕಿಸ್ತಾನ ರೇಂಜರ್ ಗಳು ಅವರನ್ನು ವಶಕ್ಕೆ ಪಡೆದಿವೆ.
ಯೋಧನನ್ನು ಸುರಕ್ಷಿತವಾಗಿ ಕರೆತರಲು ಬಿಎಸ್ ಎಫ್ ಅಧಿಕಾರಿಗಳು ಫ್ಲ್ಯಾಗ್ ಮೀಟಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.