ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ: ಸಿಎಂ ಸಂತಾಪ

ಬೆಂಗಳೂರು: ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವರಾದ ಬೇಗಾನೆ ರಾಮಯ್ಯ(90) ಬೆಂಗಳೂರಿನಲ್ಲಿ ಗುರುವಾರ ನಿಧಾನರಾಗಿದ್ದಾರೆ.

 ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ತಂದೆಯವರಾದ ಬೇಗಾನೆ ರಾಮಯ್ಯ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1972 ರಲ್ಲಿ ನರಸಿಂಹರಾಜಪುರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. 1978 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯಗಳಿಸಿದ ಬೇಗಾನೆ ರಾಮಯ್ಯ ಕಾಂಗ್ರೆಸ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಗ್ರಾಮೀಣ ನೀರು ಪೂರೈಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇಂದಿರಾಗಾಂಧಿ, ಪ್ರಣಬ್ ಮುಖರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಸಿಎಂ ಸಂತಾಪ:

ಬೇಗಾನೆ ರಾಮಯ್ಯ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಬೇಗಾನೆ ರಾಮಯ್ಯ ಅವರ ನಿಧನದಿಂದ ದುಃಖಿತನಾಗಿದ್ದೇನೆ. ತಮ್ಮ‌ ಸಜ್ಜನಿಕೆ ಮತ್ತು ಸೇವಾ ಮನೋಭಾವದಿಂದಾಗಿ ಜನಾನುರಾಗಿಯಾಗಿದ್ದ ರಾಮಯ್ಯನವರು ನಾಡಿಗೆ ಸಲ್ಲಿಸಿರುವ ಸೇವೆಯನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕಾಗಿದೆ. ರಾಮಯ್ಯನವರನ್ನು ಕಳೆದುಕೊಂಡ ಕುಟುಂಬದ ಸದಸ್ಯರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read