ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಅವರು, ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.
ಇದುವರೆಗೂ ಬೆಟ್ಟದಲ್ಲಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣ ತಡೆಯಬೇಕು. ಈ ನಿಟ್ಟಿನಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ ಮಲೆ ಮಹದೇಶ್ವರ ಬೆಟ್ಟದ ಲಡ್ಡು ಪ್ರಸಾದ ತಯಾರಿಸಬೇಕು. ಗುಣಮಟ್ಟವನ್ನು ಉನ್ನತೀಕರಿಸಬೇಕು. 100 ಗ್ರಾಂ ತೂಕದ ಲಡ್ಡು ಪ್ರಸಾದವನ್ನು 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.