ರಾಮನಗರ: ರಾಮನಗರದಲ್ಲಿ ಗುರುವಾರ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಉಚಿತವಾಗಿ ಸೀರೆ ವಿತರಿಸಲಾಗಿದೆ. ಉಚಿತ ಸೀರೆಗಾಗಿ ಮಹಿಳೆಯರು ಮುಗಿಬಿದ್ದಿದ್ದು, ಈ ವೇಳೆ ಸಾವಿರಾರು ಮಹಿಳೆಯರಿಂದ ತಳ್ಳಾಟ ನೂಕಾಟ ಉಂಟಾಗಿದೆ. ಓರ್ವ ಮಹಿಳೆಯ ಕೈಮುರಿದಿದ್ದು, ಹಲವರು ಪೆಟ್ಟು ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ, ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಸೀರೆ ಹಂಚಲಾಯಿತು. ಈ ಹಿನ್ನೆಲೆಯಲ್ಲಿ ಮಹಿಳೆಯರು ಸೀರೆಗಾಗಿ ಮುಗಿಬಿದ್ದಿದ್ದು, ಸಾವಿರಾರು ಮಹಿಳೆಯರಿಂದ ತಳ್ಳಾಟ, ನೂಕಾಟ ಉಂಟಾಗಿ ಓರ್ವ ಮಹಿಳೆ ಕೈಮುರಿದುಕೊಂಡಿದ್ದಾರೆ.