ಬೆಂಗಳೂರು : ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಕೀಲೆ ಹಾಗೂ ಮತ್ತೋರ್ವ ವ್ಯಕ್ಯಿಯ ಶವ ಪತ್ತೆಯಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ.
ಶ್ರೀನಿವಾಸಪುರದ ತೋಟದ ಮನೆಯಲ್ಲಿ ಯುವ ವಕೀಲೆ ರಮ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯಲ್ಲಿ ಇದ್ದ ಪುನೀತ್ ಎಂಬುವವರು ಕೂಡ ಶವವಾಗಿ ಪತ್ತೆಯಾಗಿದ್ದಾರೆ.ಇದು ಕೊಲೆಯೋ ಆತ್ಮಹತ್ಯೆಯೋ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.