ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಐಶ್ವರ್ಯಾ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ಇದೇ ವೇಳೆ ಇಡಿ ಅಧಿಕಾರಿಗಳು ಬೆಂಗಳೂರಿನ ಆರ್.ಆರ್.ನಗರದ ಕಾಂಗ್ರೆಸ್ ಮುಖಂಡ ತಿಬ್ಬೇಗೌಡ ನಿವಾಸದ ಮೇಲೆ ಹಾಗೂ ಮಾಜಿ ಸಚಿವ ವಿನಯ್ ಕುಲಕರಣಿ ಅವರ ಡಾಲರ್ಸ್ ಕಾಲೋನಿ ನಿವಾಸದ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.