ಮಂಡ್ಯ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಜನರು ಬಲಿಯಾಗಿದ್ದಾರೆ. ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕಾರ್ಯಾಚರಣೆ ಚುತುಕುಗೊಂಡಿದೆ. ಈ ಮಧ್ಯೆ ಉಗ್ರರ ದಾಳಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಶ್ರೀರಂಗಪಟ್ಟಣದ ಶಾಸಕ ಕೊನೆಗೂ ಕ್ಷಂಎಯಾಚಿದ್ದಾರೆ.
ಶಾಸಕ ರಮೇಶ್ ಬಂಡಿಸಿದ್ದೇಗೌಡ, ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ದಾಳಿಗೆ ಕಾರಣ ಎಂದು ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಶಾಸಕರು ಕ್ಷಮೆಯಾಚಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಮೇಶ್, ನಾನು ಹಾಗೆ ಹೇಳಬಾರದಿತ್ತು. ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ನಾನು ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಸರ್ಕಾರಗಳು ಭದ್ರತೆ ಹೆಚ್ಚಿಸಬೇಕು. ನರಮೇಧ ಮಾಡಿದವರ ವಿರುದ್ಧ ಪ್ರತಿಕಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.