BIG NEWS: ಏ. 27ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಾಧನೆಯ ಸಮಾವೇಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಏಪ್ರಿಲ್ 27 ಭಾನುವಾರದಂದು ಬೆಳಿಗ್ಗೆ 11-00 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಘನ ಉಪಸ್ಥಿತಿ, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ ಪಾಟೀಲ್, ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಶೇಷ ಉಪಸ್ಥಿತಿ ಇರಲಿದ್ದಾರೆ.

   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದ ಯಶಸ್ಸಿಗೆ ಅಂತಿಮ ಹಂತದ ಸಿದ್ಧತೆ

ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 27 ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

   ಈ ಸಂಬಂಧ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು ಏಪ್ರಿಲ್ 28 ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವು ಒಂದು ದಿನ ಮುಂಚಿತವಾಗಿ ಏಪ್ರಿಲ್ 27 ಕ್ಕೆ ಪೂರ್ವ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ತಪ್ಪದೇ ನಿರ್ವಹಿಸಿ ಎಂದರು.

   ಆಯಾ ಇಲಾಖೆಗಳು ಫಲಾನುಭವಿಗಳನ್ನು ಕರೆ ತರಬೇಕು. ಶಿಷ್ಟಾಚಾರದಂತೆ ಸಚಿವರು, ಶಾಸಕರು ಜನಪ್ರತಿನಿಧಿಗಳನ್ನು ಆಹ್ವಾನಿಸಿ. ಫಲಾನುಭವಿಗಳ ಸವಲತ್ತು ವಿತರಣೆಗೆ ಆಯಾ ಇಲಾಖೆಗಳು ಸಿದ್ಧತೆ ಮಾಡಿಕೊಳ್ಳಿ, ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆ, ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

  ಸಭೆಯಲ್ಲಿ ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬಾ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read