BREAKING NEWS: ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹ: ಲಿಂಗಾಯತ, ಒಕ್ಕಲಿಗ ನಾಯಕರ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ನಡೆದ ಒಕ್ಕಲಿಗರು, ಲಿಂಗಾಯತ ನಾಯಕರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಈ ವಿಚಾರದಲ್ಲಿ ಹಿಂದುಳಿದವರಲ್ಲೂ ಅಸಮಾಧಾನ ಶುರುವಾಗಿದ್ದು, ಅಂಥವರನ್ನು ಒಗ್ಗೂಡಿಸುವ ಜವಾಬ್ದಾರಿಯನ್ನು ಒಕ್ಕಲಿಗ ನಾಯಕರು ವಹಿಸಿಕೊಂಡಿದ್ದಾರೆ. ಅಸಮಾಧಾನಿತ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

ಲಿಂಗಾಯಿತ, ಒಕ್ಕಲಿಗ ಮಠಾಧೀಶರನ್ನು ಭೇಟಿಯಾಗಿ ಚರ್ಚಿಸುವುದು, ಅವರನ್ನು ವಿಶ್ವಾಸದ ಪಡೆದುಕೊಂಡು ಮುಂದಿನ ಹೆಜ್ಜೆ ಇಡುವುದು, ಕಳೆದ ಬಾರಿ ಮೂಡಿದ್ದ ಗೊಂದಲ ಆಗದಂತೆ ಎಚ್ಚರಿಕೆ ವಹಿಸುವುದು, ಕಳೆದ ಬಾರಿ ಲಿಂಗಾಯತ ಸಮಾಜದ ನಾಯಕರರಲ್ಲಿ ಗೊಂದಲವಾಗಿತ್ತು. ಈಗ ಆ ರೀತಿ ಆಗದಂತೆ ಕಾನೂನು ಹೋರಾಟ ಮತ್ತು ಬೀದಿಗಿಳಿದು ಹೋರಾಟ ನಡೆಸಲು ಸಮುದಾಯದ ನಾಯಕರು ಮುಂದಾಗಿದ್ದಾರೆ.

ಲಿಂಗಾಯಿತ, ಒಕ್ಕಲಿಗ ಸಮುದಾಯದ ನಾಯಕರ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಆಗ್ರಹಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಈ ಕುರಿತಾಗಿ ಗಂಭೀರ ಚರ್ಚೆ ನಡೆದಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read