HomeLatest Newsಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ,...

ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ, ಕೋರ್ಟ್ ಗೆ ಹೋದವರಿಗೂ ಪರೀಕ್ಷೆಗೆ ಅವಕಾಶ

ಬೆಂಗಳೂರು: 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ್ದು, ಆಯೋಗದ ಜಾಲತಾಣದಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಮೇ 3, 5, 7 ಮತ್ತು 9 ರಂದು ಮುಖ್ಯ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ವೆಬ್ ಸೈಟನ್ ಲ್ಲಿ ಪ್ರಕಟಿಸಲಾಗಿದೆ.

ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಇದ್ದ ಭಾಷಾಂತರ ದೋಷದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ 34 ಅಭ್ಯರ್ಥಿಗಳು ಮೇ ತಿಂಗಳಲ್ಲಿ ನಡೆಯುವ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯ ಪರೀಕ್ಷೆ ಬರೆಯಲು ಈ ಅಭ್ಯರ್ಥಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಅವಕಾಶ ಕಲ್ಪಿಸಿದ್ದು, ಅವರು ಆಯೋಗದ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಏ. 28ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಮುಖ್ಯ ಪರಿಕ್ಷಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular