ಕಲಬುರಗಿ: ಬೆಳ್ಳಂಬೆಳಗ್ಗೆ ಕಲಬುರಗಿಯಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಅಂತಾರಾಜ್ಯ ದರೋಡೆಕೋರರ ಮೇಲೆ ಫೈರಿಂಗ್ ಮಾಡಲಾಗಿದೆ.
ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 18 ಲಕ್ಷ ರೂಪಾಯಿ ದೋಚಿದ್ದವರ ಮೇಲೆ ಫೈರಿಂಗ್ ಮಾಡಲಾಗಿದೆ. ಹರಿಯಾಣ ಮೂಲದ ತಸ್ಲಿಂ ಮತ್ತು ಶರೀಫ್ ಅವರ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಆರೋಪಿಗಳನ್ನು ಬಂಧಿಸಲು ಕಲಬುರಗಿ ಗ್ರಾಮೀಣ ಠಾಣೆ ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಇಬ್ಬರ ಮೇಲೆ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಇಬ್ಬರ ಮೊಣಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ಘಟನೆಯಲ್ಲಿ ಪಿಎಸ್ಐ ಬಸವರಾಜ್ ಹಾಗೂ ಇಬ್ಬರು ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.