ಬೆಂಗಳೂರು: ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ್ದ ಬೇಸಿಗೆ ಮಳೆ ಭಾನುವಾರದಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ. ಏಪ್ರಿಲ್ 30ರವರೆಗೂ ವಿವಿಧ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಕಳೆದ 4-5 ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಮತ್ತೆ ಮಳೆ ಆರಂಭದ ಲಕ್ಷಣಗಳಿದ್ದು, ಭಾನುವಾರದಿಂದ ಏಪ್ರಿಲ್ 30 ರವರೆಗೆ ರಾಜ್ಯದ ವಿವಿಧೆಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಏಪ್ರಿಲ್ 26ರಿಂದ 30ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.