ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲೂಕು ಯರಗುಂಡೆ ಗ್ರಾಮದಲ್ಲಿರುವ ಹೆಸರಾಂತ ಆರೋಗ್ಯ ವರ್ಧಕ ಉತ್ಪನ್ನ ಜೀನಿ ಕಂಪನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಶುಕ್ರವಾರ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏಪ್ರಿಲ್ 19 ರಂದು ಸ್ವಲ್ಪ ಕೆಲಸವಿದೆ ಎಂದು ಜೀನಿ ಕಂಪನಿ ಶೆಡ್ ಗೆ ಕರೆದು ಕೈಹಿಡಿದು ಎಳೆದಾಡಿ ದಿಲೀಪ್ ಕುಮಾರ್ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ನನಗೆ ಸಹಕರಿಸು ನಿನ್ನನ್ನು ರಾಣಿಯ ರೀತಿ ನೋಡಿಕೊಳ್ಳುತ್ತೇನೆ ಎಂದು ಆಮಿಷವೊಡ್ಡಿದ್ದಾರೆ. ವಿರೋಧ ವ್ಯಕ್ತಪಡಿಸಿದಾಗ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿ ದೂರು ನೀಡಿದ್ದಾರೆ.