HomeLatest Newsಗ್ರಾಪಂ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಮೇ 28 ರಂದು ಮತದಾನ, 28ರಂದು ಫಲಿತಾಂಶ ಪ್ರಕಟ

ಗ್ರಾಪಂ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಮೇ 28 ರಂದು ಮತದಾನ, 28ರಂದು ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯದ 265 ಗ್ರಾಮ ಪಂಚಾಯಿತಿ ಸ್ಥಾನಗಳ ಉಪಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 25 ರಂದು ಮತದಾನ, ಮೇ 28ರಂದು ಫಲಿತಾಂಶ ಪ್ರಕಟಿಸಲಾಗುವುದು.

ರಾಜ್ಯ ಸರ್ಕಾರದ ಮನವಿಯ ಮೇರೆಗೆ ಮೇ 11ರಂದು ಗ್ರಾಮ ಪಂಚಾಯಿತಿಯ 265 ಸ್ಥಾನಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ರಾಜ ಚುನಾವಣಾ ಆಯೋಗ ಮುಂದೂಡಿದ್ದು, ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಮೇ 8 ರಂದು ಉಪಚುನಾವಣೆಯ ಅಧಿಸೂಚನೆ ಪ್ರಕಟಿಸಲಿದ್ದು, ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 15ರಂದು ಉಮೇದುವಾರಿಕೆ ಪರಿಶೀಲನೆ ನಡೆಯಲಿದೆ. ಮೇ 17ರಂದು ನಾಮಪತ್ರಗಳ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಮೇ 25 ರಂದು ಮತದಾನ ನಡೆಯಲಿದೆ. ಅಗತ್ಯ ಬಿದ್ದರೆ ಮೇ 27ರಂದು ಮರು ಮತದಾನ ನಡೆಸಲಾಗುವುದು. ಮೇ 28ರಂದು ಮತ ಎಣಿಕೆ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ 31 ಜಿಲ್ಲೆಗಳ 135 ತಾಲೂಕಿನ 223 ಗ್ರಾಮ ಪಂಚಾಯಿತಿಗಳ 265 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular