HomeLatest Newsರೈತರಿಗೆ ಗುಡ್ ನ್ಯೂಸ್: ಪೋಡಿ ದುರಸ್ತಿಗೆ ಇನ್ನು ಕಚೇರಿಗೆ ಅಲೆಯಬೇಕಿಲ್ಲ, ಮನೆ ಬಾಗಿಲಿಗೇ ದಾಖಲೆ

ರೈತರಿಗೆ ಗುಡ್ ನ್ಯೂಸ್: ಪೋಡಿ ದುರಸ್ತಿಗೆ ಇನ್ನು ಕಚೇರಿಗೆ ಅಲೆಯಬೇಕಿಲ್ಲ, ಮನೆ ಬಾಗಿಲಿಗೇ ದಾಖಲೆ

ಬೆಂಗಳೂರು: ಪೋಡಿ ದುರಸ್ತಿಯನ್ನು ಆನ್ಲೈನ್ ಮೂಲಕ ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸರ್ವೆ ಇಲಾಖೆ ಮುಖ್ಯಸ್ಥರೊಂದಿಗೆ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರತಿ ತಿಂಗಳ 5 ಸಾವಿರ ಪೋಡಿ ದುರಸ್ತಿ ಮಾಡಿಕೊಡುವ ಗುರಿ ನಿಗದಿ ಮಾಡಲಾಗಿದ್ದು, ಆಂದೋಲನ ರೂಪದಲ್ಲಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸರಳೀಕೃತ ರೂಪದಲ್ಲಿ ಪೋಡೊ ದುರಸ್ತಿ ಮಾಡಿಕೊಡಲಿದ್ದು, ಇದರಿಂದ ರೈತರು ಕಚೇರಿಗಳಿಗೆ ವಿನಾಕಾರಣ ಅಲೆಯುವುದು ತಪ್ಪುತ್ತದೆ. ನಾವೇ ಮನೆಗಳಿಗೆ ಹೋಗಿ 1-5 ದಾಖಲೆಗಳನ್ನು ಸಿದ್ಧಪಡಿಸುತ್ತೇವೆ. ಇವುಗಳ ಪೈಕಿ 30,476 ಪ್ರಕರಣಗಳಲ್ಲಿ ಸರ್ವೆ ಇಲಾಖೆಯಿಂದ ಭೂಮಾಪನ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಹಶೀಲ್ದಾರ್ ಕಚೇರಿಗಳಲ್ಲಿರುವ ಎ ಮತ್ತು ಬಿ ದರ್ಜೆಯ ಕಡತಗಳನ್ನು ಭೂ ಸುರಕ್ಷಾ ಯೋಜನೆ ಅಡಿ ಗಣಕೀಕರಣ ಮಾಡಿ ಇಂಡೆಕ್ಸ್ ಕ್ಯಾಟಲಾಗ್ ಮಾಡಿ ಸ್ಕ್ಯಾನ್ ಮಾಡಲಾಗುತ್ತಿದೆ. ಇದುವರೆಗೆ 18.28 ಕೋಟಿ ಪುಟಗಳಷ್ಟು ಸ್ಕ್ಯಾನ್ ಮಾಡಲಾಗಿದ್ದು, ಇನ್ನು ಮುಂದೆ ಆನ್ಲೈನ್ ನಲ್ಲಿ ಅರ್ಜಿ ಹಾಕಿ ಪ್ರಮಾಣೀಕೃತ ದಾಖಲೆ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular