ಬೆಂಗಳೂರು: ಸಿಇಟಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದೆ.
ರಾಜ್ಯದ ಹಲವೆಡೆ ಇಂತಹ ಘಟನೆ ನಡೆದಿರುವುದರಿಂದ ಶಿಕ್ಷಣ ಹಕ್ಕು ಉಲ್ಲಂಘನೆಯಾಗಿದೆ. ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಮನವಿ ಮಾಡಿದೆ.
ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಹೈಕೋರ್ಟ್ ಜೂನ್ 9ಕ್ಕೆ ವಿಚಾರಣೆಯನ್ನು ನಿಗದಿಪಡಿಸಿದೆ.
ಜನಿವಾರ ತೆಗೆಸಿದ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಹಾಗೂ ಪ್ರತಿಭಟನೆಗೆ ಕಾರಣವಾಗಿತ್ತು. ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿತ್ತು. ಇದೇ ವೇಳೆ ಈಗ ಬ್ರಾಹ್ಮಣ ಮಹಾಸಭಾ ಪಿಐಎಲ್ ಮೂಲಕ ಮರು ಪರೀಕ್ಷೆಗೆ ಮನವಿ ಮಾಡಿ ಹೈಕೋರ್ಟ್ ಮೊರೆಹೋಗಿದೆ.