ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮೊಬೈಲ್ ಸಿಕ್ಕರೆ ಸಾಕು ವಿದ್ಯಾಭ್ಯಾಸ, ತರಗತಿಯನ್ನೂ ಮರೆತು ಅದರಲ್ಲಿಯೇ ಕಾಲಕಳೆಯುತ್ತಾರೆ. ಇಲ್ಲೋರ್ವ ವಿದ್ಯಾರ್ಥಿನಿ ಕ್ಲಾಸ್ ರೂಂ ನಲ್ಲಿಯೂ ಮೊಬೈಲ್ ನಲ್ಲಿ ಮಾತನಾಡುತ್ತಿರುವುದನ್ನು ಕಂಡು ಕೋಪಗೊಂಡ ಶಿಕ್ಷಕಿ ಆಕೆಯ ಮೊಬೈಲ್ ಕಸಿದುಕೊಂಡಿದ್ದಾರೆ, ಬೈದು ಬುದ್ಧಿ ಹೇಳಿದ್ದಾರೆ. ಇದಕ್ಕೆ ವಿದ್ಯಾರ್ಥಿನಿ ರೌದ್ರಾವತಾರ ತಾಳಿದ್ದಾಳೆ.
ಶಿಕ್ಷಕಿ ತನ್ನ ಮೊಬೈಲ್ ಕಸಿದುಕೊಂಡಿದ್ದಕ್ಕೆ ವಿದ್ಯಾರ್ಥಿನಿ ತನ್ನ ಚಪ್ಪಲಿಯಿಂದ ಶಿಕ್ಷಕಿಗೆ ಕಪಾಳಮೋಕ್ಷ ಮಾಡಿದ್ದಾಳೆ. ತರಗತಿಯಲ್ಲಿಯೂ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಿದ್ದಕ್ಕೆ ಶಿಕ್ಷಕಿ ಮೊಬೈಲ್ ಕಸಿದದ್ದಕ್ಕೆ ಗುರು ಎನ್ನುವುದನ್ನೂ ಮರೆತು ವಿದ್ಯಾರ್ಥಿನಿ ಚಪ್ಪಲಿಂದ ಥಳಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜು ಕ್ಯಾಂಪಸ್ ನಲ್ಲಿಯೇ ನೂರಾರು ವಿದ್ಯಾರ್ಥಿಗಳ ಎದುರಲ್ಲೇ ವಿದ್ಯಾರ್ಥಿನಿ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆದಿದ್ದು, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾಳೆ. ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ.
ಘಟನೆ ಬಳಿಕ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.