ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಖಂಡಿಸಿ ಏಪ್ರಿಲ್ 28ರಂದು ಎರಡು ನಿಮಿಷ ಮೌನಾಚರಣೆಗೆ ಹೈಕೋರ್ಟ್ ನಿರ್ಧಾರ ಕೈಗೊಂಡಿದೆ.
ಅಂದು ಬೆಳಿಗ್ಗೆ 11 ಗಂಟೆಯಿಂದ 11 ಗಂಟೆ 2 ನಿಮಿಷದವರೆಗೆ ಮೌನಾಚರಣೆ ಮಾಡಲು ಹೈಕೋರ್ಟ್ ನಿರ್ಧಾರ ಕೈಗೊಂಡಿದೆ. ಹೈಕೋರ್ಟ್ ನ ಎಲ್ಲಾ ಪೀಠಗಳ ಅಧಿಕಾರಿ, ಸಿಬ್ಬಂದಿಯಿಂದ ಮೌನಾಚರಣೆ ನಡೆಯಲಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಸೂಚನೆಯ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶಿಸಿದ್ದಾರೆ. ಮೌನಾಚರಣೆಯ ಮೂಲಕ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎನ್ನಲಾಗಿದೆ.