HomeLatest Newsರಾಜ್ಯದ ಕುರಿಗಾಹಿಗಳಿಗೆ ಸಿಎಂ ಗುಡ್ ನ್ಯೂಸ್: ವಿವಿಧ ಸೌಲಭ್ಯ ಪಡೆಯಲು ಗುರುತಿನ ಚೀಟಿ ವಿತರಣೆ

ರಾಜ್ಯದ ಕುರಿಗಾಹಿಗಳಿಗೆ ಸಿಎಂ ಗುಡ್ ನ್ಯೂಸ್: ವಿವಿಧ ಸೌಲಭ್ಯ ಪಡೆಯಲು ಗುರುತಿನ ಚೀಟಿ ವಿತರಣೆ

ಮೈಸೂರು: ರಾಜ್ಯಾದ್ಯಂತ ಕುರಿಗಾಹಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡವ ಮೂಲಕ ಸೂಕ್ತ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು.

ಈ ನಿಟ್ಟಿನಲ್ಲಿ ಕುರಿಗಾಹಿಗಳಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಿದ ಸಿಎಂ, ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಿ ಕೃಷಿ ಉತ್ಪನ್ನ ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಮ್ಮದು ರೈತಪರ ಸರ್ಕಾರ ಎಂದು ಹೇಳಿದ್ದಾರೆ.

ನಾವು ನೀಡಿದಾಗ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular