HomeLatest Newsಈಜುಕೊಳಕ್ಕೆ ಎತ್ತರದಿಂದ ಜಿಗಿದ ವಿದ್ಯಾರ್ಥಿ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವು

ಈಜುಕೊಳಕ್ಕೆ ಎತ್ತರದಿಂದ ಜಿಗಿದ ವಿದ್ಯಾರ್ಥಿ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳದ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಜಿಗಿದ ಬಾಲಕ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇಂದ್ರೇಶ್(17) ಮೃತಪಟ್ಟ ವಿದ್ಯಾರ್ಥಿ. ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜುತ್ತಿದ್ದ ಇಂದ್ರೇಶ್ ಎತ್ತರದಿಂದ ಡೈವ್ ಮಾಡಿದಾಗ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವೇಳೆ ಘಟನೆ ನಡೆದಿದೆ.

ಕೆಲ ಸಮಯ ಈಜುಕೊಳದಲ್ಲಿ ಈಜಾಡಿದ ಇಂದ್ರೇಶ್ ಮೇಲಿನಿಂದ ಡೈವ್ ಹೊಡೆದಿದ್ದಾನೆ. ಈ ವೇಳೆ ತಲೆಗೆ ಪೆಟ್ಟು ಬಿದ್ದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇಂದ್ರೇಶ್ ಕಾಣದಿದ್ದಾಗ ಸ್ನೇಹಿತರು ಆತಂಕದಿಂದ ಈಜುಕೊಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈಜುಕೊಳದಲ್ಲೇ ಇಂದ್ರೇಶ್ ಮುಳುಗಿರುವುದು ಪತ್ತೆಯಾಗಿದೆ. ಆತನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಈ ವೇಳೆಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular