ಹಾವೇರಿ: ಮನೆ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿಗೆ ಮಾವಿನ ಹಣ್ಣು ಕೊಡುವುದಾಗಿ ಹೇಳಿ 55 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಲಗೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಮರ್ದಾನ್ ಪಟೇಲ್ ಎಂಬಾತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಾವಿನ ಹಣ್ಣು ಕೊಡುವುದಾಗಿ ಹೇಳಿ ನಿರ್ಮಾಣ ಹಂತದ ದೇವಾಲಯವೊಂದರ ಹಿಂಭಾಗದ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಹುಲಗೂರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಮರ್ದಾನ್ ಪಟೇಲ್ ನನ್ನು ಬಂಧಿಸಲಾಗಿದೆ.