ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಮತ್ತು ದ್ವೇಷ ಭಾವನೆ ಮೂಡಿಸುವ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ಭದ್ರಾವತಿಯ ಹಳೆನಗರ ಠಾಣೆ ಪೊಲೀಸರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭದ್ರಾವತಿಯ ಸಾದತ್ ಕಾಲೋನಿಯ ಸೂಫಿಯಾನ್ ಇನ್ ಸ್ಡಾಗ್ರಾಂನಲ್ಲಿ ಪಾಕಿಸ್ತಾನ ಪರವಾದ ಹೇಳಿಕೆಗಳ ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ 26 ಜನ ಬಲಿಯಾಗಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನ ಪರ ಸೂಫಿಯಾನ್ ರೀಲ್ಸ್ ಮಾಡಿದ್ದ ದ್ವೇಷ ಭಾವನೆ ಮೂಡಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.