HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ವರ್ಷಾರಂಭದಲ್ಲೇ ಸೈಕಲ್ ವಿತರಣೆ: ಸರ್ಕಾರಿ, ಖಾಸಗಿ ಶಾಲೆಯ 8ನೇ ತರಗತಿ...

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ವರ್ಷಾರಂಭದಲ್ಲೇ ಸೈಕಲ್ ವಿತರಣೆ: ಸರ್ಕಾರಿ, ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಸೌಲಭ್ಯ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ವರ್ಷಾರಂಭದಲ್ಲೇ ಸೈಕಲ್ ವಿತರಣೆ: ಸರ್ಕಾರಿ, ಖಾಸಗಿ ಶಾಲೆಯ 8ನೇ ತರಗತಿ ಮಕ್ಕಳಿಗೆ ಬಿಬಿಎಂಪಿ ಸೌಲಭ್ಯ

ಬೆಂಗಳೂರು: ಬೆಂಗಳೂರಿನ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬಿಬಿಎಂಪಿ ವತಿಯಿಂದ ಸೈಕಲ್ ವಿತರಿಸಲು ಚಿಂತನೆ ನಡೆಸಲಾಗಿದೆ. ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಹೆಚ್.ಡಿ. ಕುಮಾರಸ್ವಾಮಿ ಮತ್ತು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿತ್ತು. ನಂತರ ಬಾಲಕರಿಗೂ ಯೋಜನೆಯನ್ನು ವಿಸ್ತರಿಸಲಾಗಿತ್ತು. ಬಳಿಕ ಸೈಕಲ್ ವಿತರಣೆ ಯೋಜನೆ ಮುಂದುವರೆಸಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಬಿಬಿಎಂಪಿ ವ್ಯಾಪ್ತಿಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 2025- 26ರ ಬಜೆಟ್ ನಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ 721.41 ಕೋಟಿ ರೂ. ಮೀಸಲಿಟ್ಟಿದ್ದು, ಸರ್ಕಾರಿ ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ತೀರ್ಮಾನಿಸಲಾಗಿದೆ.

ಬಿಬಿಎಂಪಿ ಶಾಲಾ ವಿದ್ಯಾರ್ಥಿಗಳ ಜೊತೆಗೆ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಲೂ ಕೂಡ ಬಿಬಿಎಂಪಿಗೆ ಅರ್ಜಿ ಸಲ್ಲಿಸಿ ಸೈಕಲ್ ಪಡೆದುಕೊಳ್ಳಬಹುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular