BIG NEWS : ತಾಲೂಕು ಮಟ್ಟದಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಆಯೋಜನೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಕ್ಕಳ ದಾಖಲಾತಿ ಹೆಚ್ಚಿಸಲು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಶಾಲಾ ಶಿಕ್ಷಣವನ್ನು ಬಲವಡಿಸಲು, ರಾಜ್ಯದ ಎಲ್ಲಾ ಮಕ್ಕಳು ಸಾರ್ವತ್ರಿಕ ಶಿಕ್ಷಣಕ್ಕೆ ಒಳಪಡಿಸುವುದು ಅಗತ್ಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ, ದಾಖಲಾದ ಮಕ್ಕಳು ಶಾಲೆಯಲ್ಲಿ ಪ್ರತಿನಿತ್ಯ ಹಾಜರಾಗಿ, ನಿರಂತರ ಕಲಿಕೆಯಲ್ಲಿ ಭಾಗವಹಿಸಿ, ಉಳಿಯಲು, ಹಲವಾರು ಶೈಕ್ಷಣಿಕ ಸೌಲಭ್ಯಗಳು ಹಾಗೂ ಪ್ರೋತ್ಸಾಹದಾಯಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಅನುದಾನದಡಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಮಕ್ಕಳ ಕಲಿಕಾ ಗುಣಮಟ್ಟವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಇಲಾಖೆಯು ಹಲವಾರು ಯೋಜನೆಗಳನ್ನು ರೂಪಿಸಿದೆ.

ಆದಾಗ್ಯೂ ಸಹ, ಇತ್ತೀಚಿನ ವರ್ಷಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ, ಪದ.) ಪೂರ್ವ ಕಾಲೇಜುಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಬೇಕಿದೆ. ಈ ಹಿನ್ನೆಲೆಯಲ್ಲಿ ದಾಖಲಾತಿ ಹೆಚ್ಛಿಸುವ ಸಂಬಂಧ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಎಂಬ ಕಾರ್ಯಕ್ರಮವು ಶೈಕ್ಷಣಿಕ ಸಂವಾದ ಮತ್ತು ಜಾಗೃತಿಯನ್ನು ಪೋಷಕರಲ್ಲಿ ಮೂಡಿಸಲು ತಾಲ್ಲೂಕು/ವಲಯ ಹಂತದಲ್ಲಿ ಒಂದು ಹಾಗೂ ಹೋಬಳಿ ಮಟ್ಟದಲ್ಲಿ ಒಂದು ದಿನದ ಪ್ರೇರಣಾತ್ಮಕ ಶಾಲಾ ಕಾರ್ಯಕ್ರಮವನ್ನು ಏರ್ಪಡಿಸಲು ಯೋಜಿಸಲಾಗಿದೆ.

ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವಂತೆ ಪೋಷಕರನ್ನು ಸಮುದಾಯವನ್ನು ಪ್ರೇರೇಪಿಸಿ. ಉತ್ತೇಜಿಸಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ಸ್ತರಗಳ ಮೇಲ್ವಿಚಾರಕ ಅಧಿಕಾರಿಗಳಿಂದ, ಕ್ಷೇತ್ರ ಸಂಪನ್ಮೂಲ ಸಿಬ್ಬಂದಿಗಳಿಂದ, ಅಜೀಂ ಪ್ರೇಮ್ಜಿ ಫೌಂಡೇಶನ್ ಫಾರ್ ಡೆವೆಲಪ್ಮೆಂಟ್ (APF) ಸಂಸ್ಥೆಯ ಶೈಕ್ಷಣಿಕ ಸಂಪನ್ಮೂಲ ತಂಡದ ವ್ಯಕ್ತಿಗಳ ಸಹಭಾಗಿತ್ವದಲ್ಲಿ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಕುರಿತು ಕಾರ್ಯಕ್ರಮದ ಅನುಷ್ಠಾನದ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು, ದಿನಾಂಕ: 29.04.2025 ರಂದು ರಾಜ್ಯ ಮಟ್ಟದ ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಸ್ತರದ ಅಧಿಕಾರಿಗಳಿಗೆ ಆನ್ಲೈನ್ ತರಬೇತಿಯನ್ನು ನೀಡಲಾಗುತ್ತದೆ.

  1. “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಉದ್ದೇಶಗಳು :
    1.1 ಸಮುದಾಯದಲ್ಲಿ ಶಿಕ್ಷಣದ ಮಹತ್ವ, ಸರ್ಕಾರಿ ಶಾಲೆಗಳಲ್ಲಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಬಗ್ಗೆ ಹಾಗೂ ಇಲಾಖೆಯ ಶೈಕ್ಷಣಿಕ ಕಾರ್ಯಕ್ರಮಗಳ ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸುವುದು.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read