ನವದೆಹಲಿ: ಪಾಕಿಸ್ತಾನ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದ್ದು, ಎಲ್ಒಸಿಯಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ಮುಂದುವರೆಸಿದೆ.
ಭಾರತ- ಪಾಕಿಸ್ತಾನ ನಡುವಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನೆ ರಾತ್ರಿ ಭಾರತದ ಗಡಿಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪೂಂಚ್, ಕುಪ್ವಾರ ಗಡಿ ಪ್ರದೇಶಗಳ ಮೇಲೆ ದಾಳಿ ನಡೆಸಲಾಗಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನ ಸೇನಾ ಶಿಬಿರಗಳ ಮೇಲೆ ನಡೆಸುವ ಮೂಲಕ ಬಿಎಸ್ಎಫ್ ತಿರುಗೇಟು ನೀಡಿದೆ.
ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಭಾರತ-ಪಾಕ್ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಪಾಕಿಸ್ತಾನ ಸೇನೆ ಎರಡು ಮೂರು ದಿನಗಳಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಕೂಡ ತಿರುಗೇಟು ನೀಡಿದೆ. ಏಪ್ರಿಲ್ 27-28 ರ ರಾತ್ರಿ ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಸೇನಾ ಠಾಣೆಗಳು ಎದುರಿನ ಪ್ರದೇಶಗಳಲ್ಲಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದೆ.. ಭಾರತೀಯ ಪಡೆಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದವು ಎಂದು ಭಾರತೀಯ ಸೇನೆ ತಿಳಿಸಿದೆ.
During the night of 27-28 April 2025, Pakistan Army posts initiated unprovoked small arms fire across the Line of Control in areas opposite Kupwara and Poonch districts. Indian troops responded swiftly and effectively: Indian Army
— ANI (@ANI) April 28, 2025