HomeLatest Newsರಾಜ್ಯದಲ್ಲಿ ಮುಂದುವರೆದ ಮುಂಗಾರುಪೂರ್ವ ಮಳೆ ಅಬ್ಬರ: ಸಿಡಿಲಿಗೆ ಇಬ್ಬರು ಬಲಿ

ರಾಜ್ಯದಲ್ಲಿ ಮುಂದುವರೆದ ಮುಂಗಾರುಪೂರ್ವ ಮಳೆ ಅಬ್ಬರ: ಸಿಡಿಲಿಗೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರೆದಿದ್ದು, ಸಿಡಿಲಬ್ಬರದ ಮಳೆಗೆ ಭಾನುವಾರ ಇಬ್ಬರು ಸಾವನ್ನಪ್ಪಿದ್ದಾರೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದಲ್ಲಿ ಭಾನುವಾರ ಸಂಜೆ ಹೊಲದಲ್ಲಿ ಆಕಳು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಕೂಲಿ ಕಾರ್ಮಿಕ ಚನ್ನಗಿರಿ ಹಾಲೇಶಪ್ಪ(48) ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ. ಗುಡದಿನ್ನಿ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಸಾಯಣ್ಣ ಯಾದವ(55) ಎಂಬುವರು ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ ಅಮಾವಾಸ್ಯೆ ನಿಮಿತ್ತ ತಮ್ಮ ಜಮೀನಿನಲ್ಲಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಾಯಿ ಲಕ್ಷ್ಮಮ್ಮ ಅವರೊಂದಿಗೆ ತೆರಳಿದ್ದ ವೇಳೆಯಲ್ಲಿ ಸಿಡಿಲು ಬಡಿದಿದೆ. ಈ ವೇಳೆ ಅವರೊಂದಿಗೆ ಇದ್ದ ಲಕ್ಷ್ಮಮ್ಮ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ವಿವಿಧ ಕಡೆಗಳಲ್ಲಿ ಭಾನುವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular