ಬೆಂಗಳೂರು: ರಾಜ್ಯದಲ್ಲಿದ್ದ ನಾಅಲ್ವರು ಪಾಅಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿರುವ ಬೆನ್ನಲ್ಲೇ ಭಾರತದಲ್ಲಿರುವ ಪಾಕಿಸ್ತಾಅನಿ ಪ್ರಜೆಗಳಿಗೆ ದೇಶ ತೊರೆಯುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ಇದೀಗ ಅಲ್ಪಾವಧಿ ವೀಸಾ ಮೇಲೆ ಬಂದಿದ್ದ ಪಾಅಕಿಸ್ತಾನದ ನಾಲ್ವರು ಪ್ರಜೆಗಳನ್ನು ಕರ್ನಾಟಕದಿಂದ ಗಡಿಪಾರು ಮಾಡಲಾಗಿದೆ. ದೀರ್ಘಾವದಿ ವೀಸಾ ಹೊಂದಿರುವ ಇನ್ನೂ 91 ಜನರು ಕರ್ನಾಟಕದಲ್ಲಿಯೇ ಇದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಸವಾಗಿದ್ದಾರೆ. ಐವರು ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವಿಸಾದಡಿ ಭಾರತದಲ್ಲಿದ್ದಾರೆ. ಏ.೨೯ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರ ಸರ್ಕಾರ ವಿನಾಯಿತಿ ನೀಡಿದ್ದು, ಗಡುವಿನೊಳಗೆ ನಿಯಮಾನುಸಾರ ಅವರು ಹೊರ ಹೋಗಬೇಕಾಗುತ್ತದೆ.
ರಾಜ್ಯದಲ್ಲಿ ಅತಿ ಹೆಚ್ಚು ಪಾಕಿಸ್ತಾನಿ ಪ್ರಜೆಗಳು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ವಾಸವಾಗಿದ್ದಾರೆ. ಜಿಲ್ಲೆಯ ಕಾರವಾರದಲ್ಲಿ ಇಬ್ಬರು ವಾಸವಾಗಿದ್ದಾರೆ. ಇವರೆಲ್ಲ ದೀಘಾವಧಿಯ ವಿಸಾ ಹೊಂದಿದವರಾಗಿದ್ದು, ಸದ್ಯಕ್ಕೆ ಇವರು ಭಾರತದಲ್ಲಿಯೇ ಇರಲಿದ್ದಾರೆ ಎಂದು ತಿಳಿದುಬಂದಿದೆ.