ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ವಿಚಾರಣೆಗೆ ಹಾಜರಾಗಿದ್ದಾರೆ.
ಬಿಡದಿ ಪೊಲೀಸ್ ಠಾಣೆಗೆ ಅನುರಾಧಾ ವಿಚಾರಣೆಗೆ ಹಾಜರಾಗಿದ್ದಾರೆ. ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣದಲ್ಲಿ ಅನುರಾಧ ೨ಎ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು ವಕೀಲರ ಜೊತೆ ಪೊಲೀಸ್ ಠಾಣೆಗೆ ಆಗಮಿಸಿದರು.
ಬಿಡದಿ ಠಾಣೆ ಇನ್ಸ್ ಪೆಕ್ಟರ್ ಶಂಕರ್ ನಾಯಕ್ ಕೆಲ ಕಾಲ ಅನುರಾಧಾ ಅವರ ವಿಚಾರಣೆ ನಡೆಸಿದರು. ಶೂಟೌಟ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ ನನ್ನ ವಿರುದ್ಧ ಯಾವ ಕಾರಣಕ್ಕೆ ದೂರು ನೀಡಿದ್ದಾರೆ ಗೊತ್ತಿಲ್ಲ ಎಂದು ಅನುರಾಧಾ ವಿಚಾರಣೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ.