BIG NEWS: ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವುದು ಬಹಿರಂಗ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಮುನಿರತ್ನ ಸೇರಿದಂತೆ 7 ಜನರ ವಿರುದ್ಧ 3000 ಪುಟಗಳ ಚಾರ್ಜ್ ಶೀಟ್ ನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ಸಲ್ಲಿಸಿದ್ದಾರೆ.

ಚಾರ್ಜ್ ಶೀಟ್ ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರನ್ನು ಉಲ್ಲೇಖಿಸಲಾಗಿದೆ. ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ವಿಡಿಯೋ, ಫೋಟೊ ಮಾಡಿರುವುದು ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ.

ಹೆಚ್ ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಯನ್ನು ಪಡೆದಿದ್ದರು. ಜೊತೆಗೆ ಸಾಕ್ಷ್ಯಗಳಳ ಹೇಳಿಕೆಯನ್ನೂ ಪಡೆದಿದ್ದಾರೆ. ಶಾಸಕ ಮುನಿರತ್ನರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ಒಳಪಡಿಸಿದ್ದರು. ವಿಚಾರಣೆಯ ವೇಳೆ 63 ಪ್ರಶ್ನೆಗಳನ್ನು ಮುನಿರತ್ನಗೆ ಕೇಳಲಾಗಿತ್ತು. ಸದ್ಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read