ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಯ ಅಹಣ ಒಂದು ವಾರದೊಳಗೆ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾಅತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ ಎಂದರು.
ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಹಾಗಾಗಿ ಖಂಡಿತಾ ಒಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಬರಲಿದೆ ಎಂದು ಹೇಳಿದರು.