HomeUncategorizedಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 2024-25ನೇ ಶೈಕ್ಷಣಿಕ ಸಾಲಿಗೆ ಕೌನ್ಸೆಲಿಂಗ್ ಮೂಲಕ ಆಯ್ಕೆಗೆ ಪರಿಷ್ಕೃತ ವೇಳಾಪಟ್ಟಿ...

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 2024-25ನೇ ಶೈಕ್ಷಣಿಕ ಸಾಲಿಗೆ ಕೌನ್ಸೆಲಿಂಗ್ ಮೂಲಕ ಆಯ್ಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಈ ಸಂಬಂಧ ಈಗಾಗಲೇ ಉಲ್ಲೇಖ-(3) ರಂತೆ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ದಿನಾಂಕ:04.05.2025 ರಂದು ನಡೆಯಲಿರುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಪರಿಷ್ಕರಿಸಲಾಗಿದೆ.

ಕೌನ್ಸಿಲಿಂಗ್‌ ಪಕ್ರಿಯೆ ಪರಿಷ್ಕೃತ ವೇಳಾಪಟ್ಟಿ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲೇಜುಗಳ ಪ್ರಾಂಶುಪಾಲರು ಪ್ರಸ್ತುತ ಲಭ್ಯವಿರುವ ಕಾರ್ಯಭಾರದ 1. ವಿವರವನ್ನು ಇ.ಐ.ಎಂ.ಎಸ್. ನಲ್ಲಿ ಕಡ್ಡಾಯವಾಗಿ upload ಮಾಡಲು ಕೊನೆಯ ದಿನಾಂಕ; 29.04.2025(ಸಂಜೆ 5:30 ರೊಳಗೆ)

ತಾತ್ಕಾಲಿಕ ಮೆರಿಟ್ ಪಟ್ಟಿ ಹಾಗೂ ತಾತ್ಕಾಲಿಕ ಕಾರ್ಯಭಾರ ಪ್ರಕಟಿಸುವ ದಿನಾಂಕ: 03.05.2025

ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸಿಲಿಂಗ್ ಪ್ರಕ್ರಿಯೆ ದಿನಾಂಕ 05.05.2025

ಉಳಿದಂತೆ, ಉಲ್ಲೇಖಿತ-(3) ರ ಪ್ರಕಟಣೆಯಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular