HomeLatest Newsಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗ ಮಂಜುನಾಥ್ ನಿವಾಸಕ್ಕೆ ಇಂದು ಎನ್ಐಎ ಅಧಿಕಾರಿಗಳ ಭೇಟಿ ಸಾಧ್ಯತೆ

ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗ ಮಂಜುನಾಥ್ ನಿವಾಸಕ್ಕೆ ಇಂದು ಎನ್ಐಎ ಅಧಿಕಾರಿಗಳ ಭೇಟಿ ಸಾಧ್ಯತೆ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳ ತಂಡ ಇಂದು ಶಿವಮೊಗ್ಗದಲ್ಲಿ ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಶಿವಮೊಗ್ಗದ ವಿಜಯನಗರ ಬಡಾವಣೆಯಲ್ಲಿರುವ ಮಂಜುನಾಥ್ ಅವರ ಮನೆಗೆ ಭೇಟಿ ನೀಡಲಿರುವ ಎನ್ಐಎ ಅಧಿಕಾರಿಗಳ ತಂಡ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಪುತ್ರನಿಂದ ಹೇಳಿಕೆ ದಾಖಲಿಸಿಕೊಳ್ಳಲಿದೆ. ಭಯೋತ್ಪಾದಕರ ಕುರಿತಾಗಿ ಮಾಹಿತಿ ಕಲೆ ಹಾಕಲಿದೆ.

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ದಾಳಿಯ ವೇಳೆಯ ವಿಡಿಯೋ ಆಧರಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದಾರೆ. ಪ್ರವಾಸಿಗ ರಿಷಿ ಭಟ್ ಅವರ ಸೆಲ್ಫಿ ವಿಡಿಯೋದಲ್ಲಿ ಜಿಪ್ ಲೈನ್ ಆಪರೇಟರ್ ‘ಅಲ್ಲಾಹು ಅಕ್ಬರ್’ ಎಂದು ಹೇಳಿದ್ದರಿಂದ ಆತನನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular