ಬೆಂಗಳೂರು: ಬಸವ ಜಯಂತಿ, ಕಾರ್ಮಿಕರ ದಿನಾಚಾರಣೆ, ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಜನದಟ್ಟಣೆ ನಿವಾರಿಸಲು ಎನ್ ಡಬ್ಲ್ಯೂ ಕೆ ಎಸ್ ಆರ‍್ ಟಿ ಸಿ ವಿಶೇಷ ಬಸ್ ಸೌಲಭ್ಯ ಕಲಿಸಿದೆ.
ಬೆಂಗಳೂರು ಹಾಗೂ ಇತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಏ.30ರಂದು ಬುಧವಾರ ಬಸವ ಜಯಂತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ರಜೆ ಘೋಷಿಸಲಾಗಿದೆ. ಮೇ 1 ರಂದು ಕಾರ್ಮಿಕರ ದಿನಾಚರಣೆ ಹಿನ್ನೆಲೆಯಲ್ಲಿ ರಜೆ ಇದೆ. ಬಳಿಕ ಶುಕ್ರವಾರ ಒಂದು ದಿನ ಕಳೆದರೆ ಬಳಿಕ ಶನಿವಾರ ಭಾನುವಾರ ವಿಕೆಂಡ್ ಇರುವುದರಿಂದ ಸಾಲು ಸಾಅಲು ರಜೆಗಳು ಸಿಗಲಿವೆ. ಈ ಹಿನ್ನೆಲೆಯಲ್ಲಿ ಊರುಗಳಿಗೆ ಹೋಗ ಪ್ರಯಾಣಿಕರ ಸಂಖ್ಯೆ ಹೆಚ್ಚು.
ಈ ನಿಟ್ಟಿನಲ್ಲಿ ವಿಶೇಷ ಬಸ್ ಸೌಲಭ್ಯ ಕಪಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಅದೇ ರೀತಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು ಹಾಗು ಇತರೆ ಪ್ರಮುಖ ಸ್ಥಳಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರು ಈ ಬಸ್ ಗಳ ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆ ಕೋರಿದೆ.