ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು https://sevasindhuservices.karnataka.gov.in ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗ ಪಡಿಸಿಕೊಳ್ಳಲು ಈ ಮೂಲಕ ಕೋರಿದೆ.
ಅರ್ಜಿ ಸಲ್ಲಿಸಲು ಮೇ, 10 ಕೊನೆಯ ದಿನವಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶೇ.75 ರಷ್ಟು, ಇತರೆ ವಿದ್ಯಾರ್ಥಿಗಳು ಶೇ.25 ರಷ್ಟು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ ತಾಲ್ಲೂಕು, ದೂರವಾಣಿ ಸಂಖ್ಯೆ: 6361802037, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.