ವಿಜಯಪುರ: ಮಲೆ ಮಹದೇಶ್ವರ ಬೆಟ್ಟ, ಕಲಬುರಗಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆದಂತೆ ಮುಂದಿನ ದಿನಗಳಲ್ಲಿ ವಿಜಯಪುರದಲ್ಲಿಯೂ ಸಚಿವ ಸಂಪುಟ ಸಭೆ ನಡೆಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ವಿಜಯಪುರದಲ್ಲಿಯೂ ಸಚಿವ ಸಂಪುಟ ಸಭೆ ನಡೆಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುಷಿಯಿಂದ ಸಮ್ಮತಿ ಸೂಚಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ವಿಜಯಪುರದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು.
ನಮ್ಮ ಸರ್ಕಾರದಿಂದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರೋತ್ಸಾಹ ಸಿಗುತ್ತಿದೆ. ಇಲ್ಲಿನ ಯೋಜನೆಗಳಿಗೆ ವೇಗ ಸಿಗುತ್ತಿದೆ ಎಂದು ಹೇಳಿದರು.