HomeLatest Newsಚಲಿಸುತ್ತಿದ್ದ ಬಸ್ ನಿಂದ ಬಿದ್ದು ವ್ಯಕ್ತಿ ಸಾವು: ಮೃತನ ಪತ್ನಿಗೆ 10 ಲಕ್ಷ ರೂ. ಪರಿಹಾರ

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವ್ಯಕ್ತಿ ಸಾವು: ಮೃತನ ಪತ್ನಿಗೆ 10 ಲಕ್ಷ ರೂ. ಪರಿಹಾರ

ಶಿವಮೊಗ್ಗ: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಪತ್ನಿಗೆ ಅಪಘಾತ ಪರಿಹಾರ ನಿಧಿಯಿಂದ 10 ಲಕ್ಷ ರೂ. ಚೆಕ್ ಹಸ್ತಾಂತರಿಸಲಾಗಿದೆ.

2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ 17 ಎಫ್ 1445 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿದ್ದು ಗಾಯಗೊಂಡು ಮೃತಪಟ್ಟ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಗಾರಖಂಡದ ಸುಮಾರು 64 ವರ್ಷದ ಮೋಹನ್ ದ್ಯಾವನಾಯಕ ಇವರ ಪತ್ನಿ ಶಾರದಾ ಮೋಹನ ದ್ಯಾವ ನಾಯಕ ಇವರಿಗೆ ಅಪಘಾತ ಪರಿಹಾರ ನಿಧಿಯಿಂದ 10 ಲಕ್ಷ ರೂ. ಚೆಕ್‌ನ್ನು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರಿಸಿದರು.

 2024 ರ ಜು.22 ರಂದು ಶಿರಸಿಯಿಂದ ಸಾಗರ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವಾಗ ಸುಮಾರು 3.15 ಗಂಟೆಗೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೋಹನ್ ದ್ಯಾವ ನಾಯಕ ಕಾನಸೂರು ಗ್ರಾಮದ ಹಳದೋಟ ಕ್ರಾಸ್ ಹತ್ತಿರ ಬಲ ತಿರುವಿನ ರಸ್ತೆಯಲ್ಲಿ ವಾಹನದಿಂದ ಬಿದ್ದು, ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯವರು ದಿವಂಗತ ಮೋಹನ್ ದ್ಯಾವ ನಾಯಕರವರ ಪತ್ನಿ ಶಾರದಾ ಮೋಹನ ದ್ಯಾವ ನಾಯಕ ಇವರಿಗೆ ಅಪಘಾತ ಪರಿಹಾರ ನಿಧಿಯಿಂದ 10 ಲಕ್ಷ ರೂ. ಚೆಕ್ ನೀಡಲಾಯಿತು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular