HomeLatest Newsಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ 'ಗೃಹಲಕ್ಷ್ಮಿ' ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಒಟ್ಟಿಗೆ...

ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಒಟ್ಟಿಗೆ ಮೂರು ತಿಂಗಳ ಬಾಕಿ ಹಣ ಬಿಡುಗಡೆ

ಬೆಳಗಾವಿ: ಮಹಿಳೆಯರಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಜನವರಿ, ಫೆಬ್ರವರಿ, ಮಾರ್ಚ್ ತಿಂಗಳ ಕಂತು ಬಾಕಿ ಇದ್ದು, ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು. ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಗೆ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಇನ್ನೆರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular