ಬೆಳಗಾವಿ: ಬಿಪಿಎಲ್ ಕಾರ್ಡ್ ಸೇರಿದಂತೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಅಕ್ಕಿಗಿಂತ ಜೋಳ ಹೆಚ್ಚಾಗಿ ಬಳಕೆ ಮಾಡುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಡಿತರದಲ್ಲಿ 3 ಕೆಜಿ ಜೋಳ, ಎರಡು ಕೆಜಿ ಅಕ್ಕಿ ವಿತರಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಅಕ್ಕಿಯೊಂದಿಗೆ ಜೋಳ ವಿತರಣೆ ಮಾಡಿದಲ್ಲಿ ಮಾರುಕಟ್ಟೆಯಲ್ಲಿ ಅಕ್ಕಿ ಅಕ್ರಮ ಮಾರಾಟ ತಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಒಂದು ಲಕ್ಷ ಟನ್ ಜೋಳ ಖರೀದಿಗೆ ತೀರ್ಮಾನಿಸಲಾಗಿದೆ ಎಂದ ಸಚಿವರು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಪಡಿತರ ಚೀಟಿಗಳನ್ನು ವಿತರಿಸಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.