ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್(ಸಿ.ಐ.ಎಸ್.ಸಿ.ಇ.) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಏಪ್ರಿಲ್ 30ರ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ಇಮಾನ್ಯುಯೆಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿ.ಐ.ಎಸ್.ಸಿ.ಇ. 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆ ಫಲಿತಾಂಶ ಮಂಡಳಿಯ ವೆಬ್ಸೈಟ್ ಅಥವಾ ಕೆರಿಯರ್ ಪೋರ್ಟಲ್ ನಲ್ಲಿ ಪ್ರಕಟವಾಗಲಿದೆ. ಡಿಜಿ ಲಾಕರ್ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
CISCE 10ನೇ 12ನೇ ತರಗತಿ ವಿದ್ಯಾರ್ಥಿಗಳು ಬೆಳಿಗ್ಗೆ 11 ಗಂಟೆಯ ನಂತರ ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ results.cisce.org ಮತ್ತು cisce.org ನಲ್ಲಿ ಪರಿಶೀಲಿಸಬಹುದು.
ತಮ್ಮ ಅಂಕಗಳನ್ನು ವೀಕ್ಷಿಸಲು, ಅಭ್ಯರ್ಥಿಗಳು ತಮ್ಮ ವಿಶಿಷ್ಟ ID, ಸೂಚ್ಯಂಕ ಸಂಖ್ಯೆ ಮತ್ತು ಲಾಗಿನ್ ಪುಟದಲ್ಲಿ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕಾಗುತ್ತದೆ.