ನವದೆಹಲಿ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ, ಪಿಎಂ ಮೋದಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

