‘ದೇವರ ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ’ : CM ಸಿದ್ದರಾಮಯ್ಯ

ಬೆಂಗಳೂರು : ದೇವರ ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಸವ ಸಮಿತಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾನತೆಯ ಹರಿಕಾರ ಅಣ್ಣ ಬಸವಣ್ಣನ ಕುರಿತು ಮಾತನಾಡಿದರು.

ನಾಡಿನ ಜನತೆಗೆ ಬಸವ ಜಯಂತಿಯ ಶುಭಾಶಯಗಳು. ಬಸವಣ್ಣರಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗನ ಹಾಗೂ ಭಾರತೀಯನ ಕರ್ತವ್ಯ.ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ.

ದೇವಸ್ಥಾನಗಳನ್ನು ನಿರಾಕರಿಸಿ, ದೇವರ ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ – ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ.
ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ ಕಾಲದಲ್ಲಿ ಬಸವಣ್ಣನವರು ನೀಡಿದ್ದ ‘‘ದಯೆಯೇ ಧರ್ಮದ ಮೂಲವಯ್ಯಾ’’ ಎಂಬ ಶಾಂತಿ-ಸೌಹಾರ್ದತೆಯ ಮಂತ್ರವನ್ನು ನಾವೆಲ್ಲರೂ ಮನನ ಮಾಡಿಕೊಳ್ಳಬೇಕಾಗಿದೆ.ಅಂತಹ ಅರಿವಿನ ಬೆಳಕನ್ನು ನಮ್ಮೆಲ್ಲರಲ್ಲಿಯೂ ಬಸವಣ್ಣ ಮೂಡಿಸಲಿ ಎಂದು ಹಾರೈಸುತ್ತೇನೆ. ನಾಡಬಂಧುಗಳಿಗೆ ಬಸವ ಜಯಂತಿಯ ಶುಭಾಶಯಗಳು ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read