ನವದೆಹಲಿ: ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಲು ಸರ್ಕಾರ ಇಂದು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಂಡಿದೆ.
ಈ ನಿರ್ಧಾರದ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್, ಕೆಲವು ರಾಜ್ಯಗಳು ಇದನ್ನು ಉತ್ತಮವಾಗಿ ಮಾಡಿವೆ, ಆದರೆ ಇನ್ನೂ ಕೆಲವು ರಾಜ್ಯಗಳು ಇಂತಹ ಸಮೀಕ್ಷೆಗಳನ್ನು ಸಂಪೂರ್ಣವಾಗಿ ರಾಜಕೀಯ ದೃಷ್ಟಿಕೋನದಿಂದ ಮತ್ತು ಪಾರದರ್ಶಕವಲ್ಲದ ರೀತಿಯಲ್ಲಿ ನಡೆಸಿವೆ. ಅಂತಹ ಸಮೀಕ್ಷೆಗಳು ಸಮಾಜದಲ್ಲಿ ಅನುಮಾನಗಳನ್ನು ಸೃಷ್ಟಿಸಿವೆ. ಈ ಎಲ್ಲಾ ಸಂಗತಿಗಳನ್ನು ಪರಿಗಣಿಸಿ ಮತ್ತು ದೇಶದ ಸಾಮಾಜಿಕ ರಚನೆಯು ರಾಜಕೀಯದಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು, ಜಾತಿ ಗಣತಿಯನ್ನು ಸಮೀಕ್ಷೆಗಳ ಬದಲಿಗೆ ಜನಗಣತಿಯಲ್ಲಿ ಪಾರದರ್ಶಕವಾಗಿ ಸೇರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.