ಬೆಂಗಳೂರು: 9,834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್‌ಬುಕ್‌ಗಳನ್ನು ಈಗ ನೀಡಲಾಗುತ್ತಿದೆ. ಹಂತಹಂತವಾಗಿ ಯಾವುದೇ ಗ್ರಾಮಾಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ ಆಯ್ಕೆಯಾದ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದೇ ಒಂದು ರೂಪಾಯಿ ಲಂಚವಿಲ್ಲದೆ ಮಧ್ಯವರ್ತಿಗಳ ಹಾವಳಿಯೂ ಇಲ್ಲದೆ ಮಾಡಿದ್ದೇವೆ. ನೇಮಕವಾದವರು ಸಹ ಜನರ ಸೇವೆ ಮಾಡುವಾಗ ಒಂದು ರೂಪಾಯಿ ಲಂಚ ಪಡೆಯದೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.
ಒಟ್ಟು 9834 ಗ್ರಾಮ ಆಡಳಿತಾಧಿಕಾರಿಗಳಿದ್ದು, 8003 ಜನ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಹೊಸದಾಗಿ ಒಂದು ಸಾವಿರ ಜನ ಸೇರ್ಪಡೆಯಾಗುತ್ತಿದ್ದು, ಇನ್ನೂ 500 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.