ಬೆಂಗಳೂರು: ಇಂದು ಕಾರ್ಮಿಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ವೇತನದಡಿ ಕಾರ್ಯನಿರ್ವಹಿಸುತ್ತಿರುವ 12,692 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗುವುದು.
ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಸಮಾರಂಭವನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿ ನೇಮಕಾತಿ ಆದೇಶ ಪತ್ರ ವಿತರಿಸುವರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿರುವರು. ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.