BREAKING: ಪಾಕಿಸ್ತಾನಕ್ಕೆ ಹತ್ತಿರವಾಯ್ತು ಕೇಡುಗಾಲ: ಮತ್ತೆ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆ ಎಚ್ಚರಿಕೆಯನ್ನೂ ಲೆಕ್ಕಸದೇ ಅಪ್ರಚೋದಿತ ಗುಂಡಿನ ದಾಳಿ

ನವದೆಹಲಿ: ಭಾರತೀಯ ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದೆ.

ಏಪ್ರಿಲ್ 30-ಮೇ 1 ರಾತ್ರಿ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಕುಪ್ವಾರಾ, ಉರಿ ಮತ್ತು ಅಖ್ನೂರ್ ಎದುರಿನ ನಿಯಂತ್ರಣ ರೇಖೆಯಾದ್ಯಂತ ಪಾಕಿಸ್ತಾನ ಸೇನಾ ನೆಲೆಗಳು ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದವು. ಇವುಗಳಿಗೆ ಭಾರತೀಯ ಸೇನೆಯು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿದೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಪಾಕಿಸ್ತಾನಕ್ಕೆ ತಿರುಗೇಟು ನೀಡುತ್ತಿದ್ದು, ಈ ನಡುವೆ ಪಾಕಿಸ್ತಾನ ಗಡಿಭಾಗದಲ್ಲಿ ನಿರಂತರವಾಗಿ ಪ್ರಚೋದಿತ ಗುಂಡಿನ ದಾಳಿ ನಡೆಸತೊಡಗಿದೆ. ಭಾರತೀಯ ಸೇನಾಪಡೆಗಳಿಗೆ ಕಾರ್ಯಾಚರಣೆಯ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ಯಾವುದೇ ಕ್ಷಣದಲ್ಲಿ ಪಾಕಿಸ್ತಾನದ ಮೇಲೆ ಮುಗಿಬೀಳುವ ಸಾಧ್ಯತೆ ಇದೆ. ಸೇನಾ ಪಡೆಗಳು ಸಿದ್ಧತೆ ನಡೆಸುತ್ತಿರುವಾಗಲೇ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಕೇಡುಗಾಲ ಹತ್ತಿರವಾದಂತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read