ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೇ. 4 ರಂದು ರಾಜ್ಯದ 381 ಕೇಂದ್ರಗಳಲ್ಲಿ ನೀಟ್ ಎಕ್ಸಾಂ: ಪರೀಕ್ಷಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 2025- 26 ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಮೇ 4ರಂದು ದೇಶಾದ್ಯಂತ ಯುಜಿ ನೀಟ್ ಪರೀಕ್ಷೆ ನಡೆಯಲಿದೆ.

ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 1.30ರೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪ್ರವೇಶ ಪತ್ರದ ಜೊತೆಗೆ ಕಾಲೇಜಿನ ಗುರುತಿನ ಚೀಟಿ ಆಧಾರ್ ಅಥವಾ ಪ್ಯಾನ್ ಕಾರ್ಡ್ ಸೇರಿ ಯಾವುದಾದರೂ ಒಂದು ಗುರುತಿನ ಚೀಟಿ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕಡ್ಡಾಯವಾಗಿ ತರಲು ಸೂಚಿಸಲಾಗಿದೆ.

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ. ವಸ್ತ್ರ ಸಂಹಿತೆ ಅನುಸಾರ ಪೂರ್ಣ ತೋಳು ಇರುವ ಮೇಲಂಗಿ, ದೊಡ್ಡ ಬಟನ್ ಗಳು ಇರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್, ಎತ್ತರದ ಚಪ್ಪಲಿಗಳು, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ, ಕ್ಲಿಪ್ ಮತ್ತು ಇತರೆ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ.

ಎನ್.ಟಿ.ಎ. ವತಿಯಿಂದ ಶೋಧನಾ ಉಪಕರಣ ಮತ್ತು ಜಾಮರ್ ಅಳವಡಿಸಲು ಏಜೆನ್ಸಿ ಅವರನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತಾಗಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read